ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ಪ್ರದೇಶದಲ್ಲಿರುವ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಕಮೆಂಟ್ ಮಾಡಲಾಗಿದ್ದು, ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.
‘shankar11916’ ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ “ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ” ಎಂದು ಪೋಸ್ಟ್ ಮಾಡಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.ವಿಷಯ ತಿಳಿಯುತ್ತಿದ್ದಂತೆಯೇ ಉಳ್ಳಾಲ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕಿಡಿಗೇಡಿಯ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತನಿಖೆ: ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಅವರು ಆರೋಪಿಯನ್ನು ತಕ್ಷಣ ಬಂಧಿಸುವಂತೆ ಸೂಚನೆ ನೀಡಿದ್ದಾರೆ.
ಮನವಿ: ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ಯಾವುದೇ ಪ್ರಚೋದನಕಾರಿ ಅಥವಾ ಧಾರ್ಮಿಕ ದ್ವೇಷ ಹರಡುವ ಪೋಸ್ಟ್‌ಗಳನ್ನು ಹಂಚಿಕೊಳ್ಳಬಾರದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

