HomeLatest Newsಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್: 6 ಮಂದಿ ಅರೆಸ್ಟ್

ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್: 6 ಮಂದಿ ಅರೆಸ್ಟ್

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸಲು ಯತ್ನಿಸಿದ ಆರು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಹೆಜಮಾಡಿಯ ಗ್ರೀನ್ ಹೌಸ್ ನ ಮೊಹಮ್ಮದ್ ಅಸ್ಲಾಂ(23), ಕಾಟಿಪಾಳ್ಳ ಆಶ್ರಯ ಕಲೋನಿ ನಿವಾಸಿ ಚೇತನ್(20), ಚೇಳ್ಯಾರ್ ನ ನಿತಿನ್ ಅಡಪ(23), ಫರಂಗಿ ಪೇಟೆ ಅರ್ಕುಳ ಕೊಪ್ಪಲ್ ಹೌಸ್ ನ ರಿಯಾಜ್ ಇಬ್ರಾಹಿಂ(30), ಕೂಳೂರು ಕಿಲೇರಿಯಾ ಮಸೀದಿ ಸಮೀಪದ ನಿವಾಸಿ ಜಮಾಲ್ ಜಾಕೀರ್(21) ಹಳೆಯಅಂಗಡಿ ಕೊಳವೈಲ್ ನ ಗುರುಪ್ರಸಾದ್ ಬಂಧಿತ ಆರೋಪಿಗಳು.

ಇವರಲ್ಲಿ ಮಹಮ್ಮದ್ ಅಸ್ಲಾಂ, ರಿಯಾಜ್ ಇಬ್ರಾಹಿಂ ಸೌದಿ ಅರೇಬಿಯಾದಲ್ಲಿದ್ದು, ಲುಕ್ ಔಟ್ ಸುತ್ತೋಲೆ ಹೊರಡಿಸಿ ಅಲ್ಲಿನ ಪೊಲೀಸರ ಮೂಲಕ ಕರೆಸಿಕೊಂಡು ಬಂಧಿಸಲಾಗಿದೆ. ಇವರೆಲ್ಲರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಬಂಟ್ವಾಳ ಹತ್ಯೆ ಪ್ರಕರಣದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಪತ್ತೆಗಾಗಿ ಪೊಲೀಸ್ ಇಲಾಖೆಯಿಂದ ವಿಶೇಷ ತಂಡ ರಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular