HomeKarnatakaಪ್ರಚೋದನಾಕಾರಿ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ಗೆ ಹೈಕೋರ್ಟ್ ತಡೆ

ಪ್ರಚೋದನಾಕಾರಿ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಮುಸ್ಲಿಮರ ಕುರಿತಾಗಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅಲಿಯಾಸ್ ಮಿಥುನ್ ಚಕ್ರವರ್ತಿ ದೇವಿದಾಸ್ ಶೇಟ್ ವಿರುದ್ಧ ದಾಖಲಾದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಧಾರವಾಡದ ಟೌನ್ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸಂಜೀವ್ ಕುಮಾರ್ ಹಂಚಾಟೆ ರಜಾಕಾಲೀನ ಏಕ ಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು.

ಕೆಲಕಾಲ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಪೀಠ ಪ್ರಕರಣವನ್ನು ವಿಸ್ತೃತವಾಗಿ ಪರಿಗಣಿಸುವ ಅಗತ್ಯವಿದೆ. ಮೇಲ್ನೋಟಕ್ಕೆ ತಡೆ ನೀಡುವ ಪ್ರಕರಣ ಇದಾಗಿದೆ. ಆದ್ದರಿಂದ ಪ್ರಕರಣಕ್ಕೆ ತಡೆಜಾಜ್ಞೆ ನೀಡಲಾಗಿದೆ ಎಂದು ಆದೇಶಿಸಿದೆ..

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಪೋಲೀಸ್ ದೂರು ನೀಡಿದ್ದಾರೆ. ಅವರು ಬಾಧಿತರಲ್ಲ, ಇದರಿಂದ ದೂರು ನೀಡುವ ಯಾವುದೇ ಹಕ್ಕು ಅವರಿಗೆ ಇಲ್ಲ. ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದು ಸಂವಿಧಾನದ 19ನೇ ವಿಧಿಯ ವ್ಯಾಪ್ತಿಗೆ ಬರುತ್ತದೆ. ಹಾಲಿ ಪ್ರಕರಣಕ್ಕೆ ಬಿಎನ್ಎಸ್ ಸೆಕ್ಷನ್ 196 ಪ್ರಚೋದನಾಕಾಕಾರಿ ಭಾಷಣ ಮಾಡಿ ವಿವಿಧ ಗುಂಪುಗಳ ನಡುವೆ ದ್ವೇಷ ಹರಡುವುದು ಅನ್ವಯಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular