BIG NEWS : ಪ್ರಚೋದನಕಾರಿ ಹೇಳಿಕೆ : ‘ಪ್ರಮೋದ್ ಮುತಾಲಿಕ್’ ಗಡಿಪಾರಿಗೆ ಆಗ್ರಹಿಸಿ ದೂರು

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶ್ರೀರಾಮಸೇನೆ ಸಂಘಟನೆಯ ಪ್ರಮೋದ್ ಮುತಾಲಿಕ್ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.

ಮುಸ್ಲಿಮ್ ಸಂಘಟನೆಗಳ ನಾಯಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕೆ 8 ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ನೀಡಿದ ದೂರಿನ ಅನ್ವಯ ಕಲಂ 153(ಎ), 295(ಎ) ಐಪಿಸಿ ಅಡಿ ಮುತಾಲಿಕೆ ವಿರುದ್ಧ ಪ್ರಕರಣ ದಾಖಲಾಗಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು ಎಂದು ವಾಗ್ಧಾಳಿ ನಡೆಸಿದರು.ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ, ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಎಂದು ಪ್ರಮೋದ್ ಮುತಾಲಿಕ್ ವಾಗ್ಧಾಳಿ ನಡೆಸಿದ್ದರು.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read