ಪ್ರಚೋದನಾಕಾರಿ ಹೇಳಿಕೆ: ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್ಐಆರ್

ದಾವಣಗೆರೆ: ಗಣೇಶೋತ್ಸವದ ಸಂದರ್ಭದಲ್ಲಿ ಡಿಜೆ ಬಳಕೆಗೆ ನಿಷೇಧ ಹೇರಿದ ವಿಷಯದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಮತ್ತು ವಾಹನ ಸಂಚಾರ ತಡೆದು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಆರೋಪದಡಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತು ಅವರ ಬೆಂಬಲಿಗರ ವಿರುದ್ಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಯುವಕರು ಡಿಜೆ ಬಳಸಿ ನಿಷೇಧಾಜ್ಞೆ ಉಲ್ಲಂಘಿಸಿ ಎಂದು ರೇಣುಕಾಚಾರ್ಯ ಕರೆ ನೀಡಿದ್ದರು. ತಾಕತ್ತಿದ್ದರೆ ಪೊಲೀಸರು, ಜಿಲ್ಲಾಡಳಿತ ಡಿಜೆ ಬಳಕೆ ತಡೆಯಲಿ ಎಂದು ಸವಾಲು ಹಾಕಿದ್ದರು. ಶುಕ್ರವಾರ ರಾತ್ರಿ ಪೊಲೀಸರು ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಣೇಶೋತ್ಸವ ಮತ್ತು ಈದ್ ಮಿಲಾದ್ ಮೆರವಣಿಗೆ ವೇಳೆ ಡಿಜೆ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಬೇರೆ ಧರ್ಮದವರು ಮೈಕ್ ನಲ್ಲಿ ಆಜಾನ್ ಕೂಗುವುದನ್ನೂ, ಸಾರ್ವಜನಿಕರ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಿ ನಮಾಜ್ ಮಾಡುವುದನ್ನು ಜಿಲ್ಲಾಡಳಿತ, ಪೊಲೀಸರು ತಡೆಯಲಿ ಎಂದು ರೇಣುಕಾಚಾರ್ಯ ಸವಾಲು ಹಾಕಿದ್ದರು. ನಿರಂತರವಾಗಿ ಜಿಲ್ಲಾಡಳಿತದ ವಿರುದ್ಧ ವಾಗ್ದಾಳಿ ನಡೆಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read