ಬೆಂಗಳೂರು : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ’ಯಾಗಿ ‘ಪಿ.ಎಸ್ ದಿನೇಶ್ ಕುಮಾರ್’ ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು.
ನ್ಯಾಯಮೂರ್ತಿ ಪ್ರತಿನಿಧಿ ಶ್ರೀನಿವಾಸಾಚಾರ್ಯ ದಿನೇಶ್ ಕುಮಾರ್ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಜರಿದ್ದು, ಶುಭ ಹಾರೈಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.