HomeKarnatakaBREAKING NEWS: ಪಿಎಸ್ಐಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

BREAKING NEWS: ಪಿಎಸ್ಐಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಪಿಎಸ್ಐ ಓರ್ವ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಪಿಎಸ್ಐ ಉದ್ದಪ್ಪ ಕಟ್ಟಿಕಾರ ಪತ್ನಿ ಪ್ರತಿಮಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಪ್ರತಿಮಾ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿಎಸ್ಐ ಉದ್ದಪ್ಪ, ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಆರೋಪ ಕೇಳಿಬಂದಿದೆ. ಪತ್ನಿ ಪ್ರತಿಮಾ, ಮಕ್ಕಳ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಕೇಳಿದ್ದಕ್ಕೆ ಉದ್ದಪ್ಪ ಮಾರಣಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಪ್ರತಿಮಾ ಕತ್ತು, ಕಣ್ಣಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆಯೂ ಉದ್ದಪ್ಪ, ಪತ್ನಿ ಮೇಲೆ ಹಲ್ಲೆ ನಡೆಸಿದ್ದ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಠಾಣೆಯಲ್ಲಿ ಕೇಸ್ ಕೂದ ದಾಖಲಾಗಿತ್ತು. ಕೋರ್ಟ್ ಸೂಚನೆ ಮೇರೆಗೆ ಪ್ರತಿಮಾ ಬೆಳಗಾವಿಗೆ ಬಂದು ರಾಮಮೂರ್ತಿನಗರದ ಮನೆಯಲ್ಲಿ ವಾಸವಾಗಿದ್ದರು.

ಬೆಳಗಾವಿಯ ಮಾಳಮಾರುತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular