HomeKarnatakaಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ.

ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ ಠಾಣೆ ಕಾನ್ ಸ್ಟೆಬಲ್ ಧನರಾಜ್ ಹಲ್ಲೆ ಮಾಡಿದ ಘಟನೆ ಭಾನುವಾರ ನಡೆದಿದೆ. ಮಾಧವನಗರದ ಆರ್.ಆರ್.ಕೆ. ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಡೆದ ಗ್ರಾಮ ಆಡಳಿತ ಅಧಿಕಾರಿಗಳು ಹುದ್ದೆಯ ಕಡ್ಡಾಯ ಕನ್ನಡ ಪರೀಕ್ಷೆಯ ಬಂದೋಬಸ್ತ್ ಮೇಲುಸ್ತುವಾರಿಯಾಗಿ ಪಿಎಸ್ಐ ಮಲ್ಲಮ್ಮ ಅವರನ್ನು ನಿಯೋಜಿಸಲಾಗಿತ್ತು.

ಅದೇ ಪರೀಕ್ಷಾ ಕೇಂದ್ರದಲ್ಲಿ ಬಂದೋಬಸ್ತ್ ನಲ್ಲಿದ್ದ ಕಾನ್ ಸ್ಟೆಬಲ್ ಧನರಾಜ್ ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಅವರ ಮೇಲೆ ಧನರಾಜ್ ಹಲ್ಲೆ ನಡೆಸಿದ್ದಾನೆ. ಮಹಿಳೆ ಎಂಬುದನ್ನು ನೋಡದೆ ನನ್ನ ಶರ್ಟ್, ಕುತ್ತಿಗೆಯ ಭಾಗ ಹಿಡಿದು ಮರಕ್ಕೆ ಗುದ್ದಿದ್ದಾನೆ. ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಕ್ಷಣ ಬ್ರಿಮ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದೇನೆ. ಬ್ಲಡ್ ಕ್ಲಾಟ್ ಆಗಿದೆ ಎಂದು ಪಿಎಸ್ಐ ಮಲ್ಲಮ್ಮ ದೂರಿದ್ದಾರೆ. ಕರ್ತವ್ಯಕ್ಕೆ ತಡವಾಗಿ ಬಂದು ಪಿಎಸ್ಐ ಮಲ್ಲಮ್ಮ ಅವರ ಮೇಲೆ ಹಲ್ಲೆ ಮಾಡಿದ ಕಾನ್ ಸ್ಟೆಬಲ್ ಅಮಾನತು ಮಾಡಲಾಗಿದೆ ಎಂದು ಎಸ್ಪಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular