HomeKarnatakaBREAKING NEWS: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

BREAKING NEWS: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಗದಗ: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಠಾಣೆಯ ಪಿಎಸ್ ಐ ನಿಖಿಲ್ ಕಾಂಬ್ಳೆ ಹಾಗೂ ಕಾನ್ಸ್ಟೇಬಲ್ ಶಂಕರ್ ನಾಲಕರ್ ಅಮಾನತುಗೊಂಡವರು. ಕಾಲೇಜು ವಿದ್ಯಾರ್ಥಿನಿ ತನಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿರುವುದಾಗಿ ಪಿಎಸ್ ಐ ಹಾಗೂ ಕಾನ್ಸ್ಟೇಬಲ್ ವಿರುದ್ಧ ಗದಗ ಪೊಲೀಸ್ ವರಿಷ್ಠಾಧಿಕರಿಗೆ ದೂರು ನೀಡಿದ್ದಳು.

ಈ ಹಿನ್ನೆಲೆಯಲ್ಲಿ ಗದಗ ಎಸ್ ಪಿ ಬಿ.ಎಸ್.ನೇಮಗೌಡ ಪಿಎಸ್ ಐ ನಿಖಿಲ್ ಕಾಂಬ್ಳೆ ಹಾಗೂ ಕಾನ್ಸ್ಟೇಬಲ್ ಶಂಕರ್ ನಾಲಕರ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಕಿರುಕುಳ ಪ್ರಕರಣ ಸಂಬಂಧ ಇಬ್ಬರ ವಿರುದ್ಧ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular