BREAKING: ಸಿಎಂ ಗೃಹಕಚೇರಿ ಕೃಷ್ಣಾ ಬಳಿ PSI ಪರೀಕ್ಷಾ ಅಭ್ಯರ್ಥಿಗಳ ಪ್ರತಿಭಟನೆ; ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಬೆಂಗಳೂರು: ಒಂದೆಡೆ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಬಳಿ ಸಿಎಂ ಜನತಾ ದರ್ಶನ ಕಾರ್ಯಕ್ರಮ ನಡೆದಿದ್ದರೆ ಇನ್ನೊಂದೆಡೆ ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಡಿಸೆಂಬರ್ 23ರಂದು 545 ಪಿಎಸ್ ಐ ಹುದ್ದೆಗೆ ಮರುಪರೀಕ್ಷೆ ನಿಗದಿ ಮಾಡಿದ್ದು, ಕೇವಲ ಒಂದು ತಿಂಗಳು ಮಾತ್ರ ಕಾಲವಾಕಾಶವಿರುವುದಕ್ಕೆ ಸರ್ಕಾರದ ವಿರುದ್ಧ ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಗೆ ಕೇವಲ 30 ದಿನಗಳ ಕಾಲಾವಕಾಶ ನೀಡಲಾಗಿದೆ. ಕನಿಷ್ಠ 2 ತಿಂಗಳು ಕಾಲಾವಕಾಶ ನೀಡಬೇಕು ಎಂದು ಪರೀಕ್ಷಾರ್ಥಿಗಳು ಆಗ್ರಹಿಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read