HomeKarnatakaBREAKING: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಮುಂದೂಡಿಕೆ

BREAKING: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಮುಂದೂಡಿಕೆ

ಬೆಳಗಾವಿ: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕವನ್ನು ಮುಂಡೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿ ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕವನ್ನು 3-6 ತಿಂಗಳ ಕಾಲ ಮುಂದೂಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪಿಎಸ್ ಐ ನೇಮಕಾತಿ ಮರುಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಮರುಪರೀಕ್ಷೆ ದಿನಾಂಕವನ್ನು 2024ರ ಜನವರಿ 23ಕ್ಕೆ ಮುಂದೂಡಲಾಗಿದೆ. ಪಿಎಸ್ ಐ ನೇಮಕಾತಿ ಮರುಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular