HomeKarnatakaBREAKING: ನಕಲಿ ಅಂಕಪಟ್ಟಿ ಸಲ್ಲಿಸಿ PSI ಹುದ್ದೆಗೆ ಆಯ್ಕೆಯಾಗಿದ್ದ ಕಾನ್ ಸ್ಟೆಬಲ್ ವಿರುದ್ಧ ಎಫ್ಐಆರ್

BREAKING: ನಕಲಿ ಅಂಕಪಟ್ಟಿ ಸಲ್ಲಿಸಿ PSI ಹುದ್ದೆಗೆ ಆಯ್ಕೆಯಾಗಿದ್ದ ಕಾನ್ ಸ್ಟೆಬಲ್ ವಿರುದ್ಧ ಎಫ್ಐಆರ್

ಬೆಂಗಳೂರು: ನಕಲಿ ಅಂಕಪಟ್ಟಿ ಸಲ್ಲಿಸಿದ್ದ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪಿಎಸ್ಐ ಆಗಿ ಆಯ್ಕೆಯಾಗಿದ್ದ ಕಾನ್ಸ್ಟೇಬಲ್ ಪೈಗಂಬರ್ ನದಾಫ್ ವಿರುದ್ಧ ನಕಲಿ ಅಂಕಪಟ್ಟಿ ಸೃಷ್ಟಿಸಿದ ಆರೋಪ ಕೇಳಿ ಬಂದಿದೆ.

ವಿಧಾನಸೌಧ ಠಾಣೆಯಲ್ಲಿ ಪೈಗಂಬರ್ ನದಾಫ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬೆಂಗಳೂರಿನ ಭಾರತೀನಗರ ಠಾಣೆಯಲ್ಲಿ ಪಿಸಿ ಆಗಿರುವ ಪೈಗಂಬರ್ ಕ್ರೀಡಾ ಕೋಟಾದಲ್ಲಿ ಪಿಎಸ್ಐ ಆಗಿ ಆಯ್ಕೆಯಾಗಿದ್ದರು.

ಅವರು ಸಲ್ಲಿಸಿದ್ದ ಬಿಎ ಪದವಿ ಅಂಕಪಟ್ಟಿ ನೈಜತೆಗೆ ಮೈಸೂರು ವಿವಿಗೆ ಕಳುಹಿಸಲಾಗಿತ್ತು. ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ಎಂಬುದು ಪತ್ತೆಯಾಗಿದೆ. ಈ ಸಂಬಂಧ ಪೈಗಂಬರ್ ವಿರುದ್ಧ ಕ್ರಮಕ್ಕೆ ದೂರು ನೀಡಲಾಗಿದೆ. ನೇಮಕಾತಿ ವಿಭಾಗದ ಅಧಿಕಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular