HomeKarnatakaBREAKING: ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು

BREAKING: ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಬಂಧಿಸಲು ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಗುಂಡು ಹಾರಿಸಲಾಗಿದೆ.

ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ವಿನೋಬನಗರ ಪಿಎಸ್ಐ ಸುನಿಲ್ ಅವರು ಹಲವು ಕಳ್ಳತನ, ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಭವಿತ್ ಮೇಲೆ ಫೈರಿಂಗ್ ಮಾಡಿದ್ದಾರೆ. ಕಾನ್ಸ್ ಟೆಬಲ್ ಪ್ರಶಾಂತ್ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಭವಿತ್ ವಿರುದ್ಧ 7 ಪ್ರಕರಣ ದಾಖಲಾಗಿವೆ. ಈತನ ವಿರುದ್ಧ ಕೊಲೆ ಪ್ರಕರಣ, ದರೋಡೆ ಹಾಗೂ ಕೊಲೆ ಯತ್ನ ಪ್ರಕರಣಗಳಿವೆ. ನಿನ್ನೆ ರಾತ್ರಿ ಜಯನಗರ ಠಾಣೆ ಮಿತಿಯಲ್ಲಿ ಇಬ್ಬರು ಸ್ನೇಹಿತರ ಜೊತೆ ಸೇರಿ ಅಮಾಯಕ ಸಾರ್ವಜನಿಕರನ್ನು ತಡೆದು ಅವರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಸರಣಿ ಘಟನೆಯಲ್ಲಿ ಭಾಗಿಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಪಿಎಸ್ಐ ಸುನೀಲ್ ಆರೋಪಿಯ ಹುಡುಕಾಟ ನಡೆಸಿ ಬಂಧಿಸಲು ತೆರಳಿದ್ದಾಗ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದ್ದು, ಗಾಯಗೊಂಡ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular