HomeUncategorizedಪಿಎಸ್​ಐ ಹಗರಣ: ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್:...

ಪಿಎಸ್​ಐ ಹಗರಣ: ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್: ಜೈಲುವಾಸವೇ ಗತಿ

ಬೆಂಗಳೂರು: 544 ಪಿಎಸ್‌ಐ ಹುದ್ದೆ ನೇಮಕಾತಿ ಹಗರಣ ಹಾಗೂ ಎಫ್‌ಡಿಎ, ಎಸ್‌ಡಿಎ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್‌‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮುಖಭಂಗವಾಗಿದೆ.

ಆರ್.ಡಿ.ಪಾಟೀಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಮಾಧಾನಕರ ಕಾರಣಗಳಿಲ್ಲವೆಂದು ನ್ಯಾಯಾಲಯ ವಜಾಗೊಳಿಸಿದೆ. ಪರೀಕ್ಷಾರ್ಥಿಗಳಿಗೆ ಬ್ಲೂಟೂತ್ ಸಾಧನಗಳನ್ನು ನೀಡಿ ಅಕ್ರಮ ಎಸಗಿದ್ದ ಆರೋಪದ ಮೇಲೆ ಆರ್.ಡಿ. ಪಾಟೀಲ್ ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಡಿ. ಪಾಟೀಲ್ ವಿರುದ್ಧ 26 ಪ್ರಕರಣಗಳು ದಾಖಲಾಗಿದ್ದರೂ ಆತ 20 ಪ್ರಕರಣಗಳ ಬಗ್ಗೆ ಮಾತ್ರ ಮಾಹಿತಿ ನೀಡಿದ್ದಾನೆ. ಅಲ್ಲದೆ, ಕಳೆದ ಬಾರಿ ಬೇಲ್ ಪಡೆದಾಗ ಮತ್ತೊಂದು ಹಗರಣದಲ್ಲಿ ಭಾಗಿಯಾಗಿದ್ದಾನೆ ಎಂದು ಸರ್ಕಾರ ವಾದಿಸಿತು. ವಾಅದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ಆರ್.ಡಿ.ಪಾಟೀಲ್ ಜಾಮೀನು ಅರ್ಜಿ ವಜಾಗೊಳಿಸಿದೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ ಆತನ ಜಾಮೀನು ಅರ್ಜಿಯನ್ನು ನಿರಾಕರಿಸಿತ್ತು. ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಆತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಇದೀಗ ಅಲ್ಲಿಯೂ ಜಾಮೀನು ಸಿಗದೆ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಆರ್.ಡಿ.ಪಾಟೀಲ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

ಸಂಚಾರಿ ನಿಯಮ ಉಲ್ಲಂಘನೆ: ಫೈನ್ ಕಟ್ಟದೇ ತಪ್ಪಿಸಿಕೊಳ್ಳುತ್ತಿದೀರಾ? ಕಠಿಣ ಕ್ರಮಕ್ಕೆ ಮುಂದಾಗಿದೆ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಶೇ 50ರಷ್ಟು ರಿಯಾಯಿತಿ ನೀಡಿದರೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ ತಪ್ಪಿಸಿಕೊಂಡು ಓಡಾಡುತ್ತಿದ್ದರೆ ಇನ್ಮುಂದೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

2019ರಿಂದ 2026ರ ಆಗಸ್ಟ್‌ವರೆಗೆ ರಾಜ್ಯದಲ್ಲಿ ದಾಖಲಾಗಿರುವ 8.16 ಕೋಟಿ ಸಂಚಾರ ಉಲ್ಲಂಘನೆ ಪ್ರಕರಣಗಳ ಪೈಕಿ 5.53 ಕೋಟಿ ಪ್ರಕರಣಗಳು ಇನ್ನೂ ಇತ್ಯರ್ಥವಾಗಿಲ್ಲ. ಈ ಪ್ರಕರಣಗಳ ದಂಡ ಮೊತ್ತ ಬರೋಬ್ಬರಿ 3,006.70 ಕೋಟಿ ಬಾಕಿಯಿದೆ ಎಂದು ವರದಿಯಾಗಿದೆ.

ರಾಜ್ಯದ ಒಟ್ಟು ಬಾಕಿ ಪ್ರಕರಣಗಳಲ್ಲಿ ಬೆಂಗಳೂರಿನ ಪಾಲು ಅತಿ ಹೆಚ್ಚು. ನಗರದಲ್ಲಿ ದಾಖಲಾಗಿರುವ 5.85 ಕೋಟಿ ಸಂಚಾರ ಉಲ್ಲಂಘನೆ ಪ್ರಕರಣಗಳ ಪೈಕಿ 3.72 ಕೋಟಿಗೂ ಅಧಿಕ ಪ್ರಕರಣಗಳು ಬಾಕಿ ಉಳಿದಿವೆ. ಇದರಿಂದ ಬೆಂಗಳೂರಿನಲ್ಲಿ ವಸೂಲಾಗದೆ ಉಳಿದಿರುವ ದಂಡದ ಮೊತ್ತ 2,048.56 ಕೋಟಿ ಎಂದು ತಿಳಿದುಬಂದಿದೆ. ಬಾಕಿ ಇರುವ ಸಂಚಾರ ದಂಡದ ವಿಚಾರವಾಗಿ ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಗಳನ್ನು ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿತ್ತು. ಬಾಕಿ ಇರುವ ಇ-ಚಲನ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದ ಕೋರ್ಟ್‌, ಬಾಕಿ ದಂಡ ಹೊಂದಿರುವ ವಾಹನಗಳನ್ನು ವಶಕ್ಕೆ ಪಡೆಯುವುದು ಹಾಗೂ ಆನ್‌ಲೈನ್ ಸಾರಿಗೆ ಸಂಬಂಧಿತ ಸೇವೆಗಳನ್ನು ಸ್ಥಗಿತಗೊಳಿಸುವಂತಹ ಕ್ರಮಗಳ ಬಗ್ಗೆಯೂ ನಿರ್ದೇಶನ ನೀಡಿದೆ.

ಈ ಹಿನ್ನೆಲೆಯಲ್ಲಿ ಸಂಚಾರ ದಂಡ ಪಾವತಿಯನ್ನು ಕಡ್ಡಾಯಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕ ಎಂ.ಎ. ಸಲೀಂ ತಿಳಿಸಿದ್ದಾರೆ. ವಾಹನದ ಫಿಟ್‌ನೆಸ್ ಸರ್ಟಿಫಿಕೇಟ್ (FC) ಪಡೆಯಲು ಬಾಕಿ ಇರುವ ಸಂಚಾರ ದಂಡ ಪಾವತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಚಿಂತನೆ ನಡೆದಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿರುವ ವಾಹನಗಳಿಗೆ ವಿಮೆ ನವೀಕರಣಕ್ಕೆ ಅವಕಾಶ ನೀಡದಂತೆ ಕೆಲವು ಕಾಯ್ದೆಗಳಿಗೆ ತಿದ್ದುಪಡಿ ತರಲು ಕೂಡ ಇಲಾಖೆ ಪ್ರಯತ್ನಿಸುತ್ತಿದೆ.

ಸಂಚಾರ ದಂಡ ಪಾವತಿಗೆ ಜನರನ್ನು ಉತ್ತೇಜಿಸಲು ವಿವಿಧ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಸಂಚಾರ ದಂಡವನ್ನು ವಿದ್ಯುತ್ ಬಿಲ್‌ಗೆ ಲಿಂಕ್ ಮಾಡುವ ಸಾಧ್ಯತೆಯ ಬಗ್ಗೆಯೂ ಸುಪ್ರೀಂ ಕೋರ್ಟ್‌ ಸಲಹೆ ನೀಡಿದ್ದು, ಈ ಆಯ್ಕೆಗಳನ್ನು ಪರಿಶೀಲಿಸಲಾಗುವುದು ಎಂದು ಸಲೀಂ ತಿಳಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸರ ಹಿರಿಯ ಅಧಿಕಾರಿಗಳ ಪ್ರಕಾರ, ಸಂಪರ್ಕರಹಿತ ಜಾರಿ ವ್ಯವಸ್ಥೆ ಹಾಗೂ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳು ದಂಡ ವಸೂಲಿ ಕಡಿಮೆಯಾಗಲು ಪ್ರಮುಖ ಕಾರಣಗಳಾಗಿವೆ. ಶೇ 80ಕ್ಕೂ ಅಧಿಕ ಪ್ರಕರಣಗಳು ಸ್ವಯಂಚಾಲಿತ ಕಣ್ಗಾವಲು ಕ್ಯಾಮರಾಗಳ ಮೂಲಕ ದಾಖಲಾಗುತ್ತಿವೆ. ವಾಹನ ಚಾಲಕರನ್ನು ಸ್ಥಳದಲ್ಲೇ ನಿಲ್ಲಿಸದ ಕಾರಣ ಕೆಲವರು ಎಸ್‌ಎಂಎಸ್ ಮೂಲಕ ಬರುವ ನೋಟಿಸ್‌ಗಳನ್ನು ನಿರ್ಲಕ್ಷಿಸುತ್ತಾರೆ ಅಥವಾ ಪೊಲೀಸರ ಕೈಗೆ ಸಿಕ್ಕಿಬೀಳುವವರೆಗೆ ದಂಡದ ಬಗ್ಗೆ ಗಮನಹರಿಸುವುದಿಲ್ಲ. ಇವು ಕೂಡ ದಂಡ ವಸೂಲಿ ಸಮರ್ಪಕವಾಗಿ ಆಗದಿರಲು ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular