ಮಂಡ್ಯ: ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸುರೇಶ್ಗೌಡ ಪುತ್ರಿ ಐಶ್ವರ್ಯ ಪಿಎಸ್ಐ ಸವಿತಾ ಪಾಟೀಲ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ.
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಸುರೇಶ್ಗೌಡ ಪುತ್ರಿ ಐಶ್ವರ್ಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಗರ್ಭಗುಡಿಗೆ ಬಿಡುವ ವಿಚಾರದಲ್ಲಿ ಕಿರಿಕ್ ಮಾಡಿದ್ದರು. ಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್ಐ ಸವಿತಾ ಬಳಿ ಐಶ್ವರ್ಯ ವಾಗ್ವಾದ ನಡೆಸಿದ್ದರು. ಕೋಪದ ಬರದಲ್ಲಿ ಐಶ್ವರ್ಯ ಪಿಎಸ್ಐ ಸವಿತಾ ಅವರ ಕಪಾಳಕ್ಕೆ ಹೊಡೆದಿದ್ದರು.
ಈ ವಿಡಿಯೋ ಸಿಸಿಟಿವಿ ಕ್ಯಾಮಾರದಲ್ಲಿಯೂ ಸೆರೆಯಾಗಿತ್ತು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿದ್ದ ಐಶ್ವರ್ಯ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ, ಜಾಮೀನು ಪಡೆದುಕೊಂಡಿದ್ದರು. ಆದರೆ ನ್ಯಾಯಾಲಯ ಐಶ್ವರ್ಯ ಅವರಿಗೆ ಕ್ಷಮೆ ಕೋರಲು ತಾಕೀತು ಮಾಡಿತ್ತು ಈ ಹಿನ್ನೆಲೆ ಐಶ್ವರ್ಯ ವಿಡಿಯೋ ಮೂಲಕ ಬಹಿರಂಗ ಕ್ಷಮೆಕೋರಿದ್ದಾರೆ.
ಭೀಮನ ಅಮಾವಾಸ್ಯೆಯಂದು ಆಗಸ್ಟ್ 12ರಂದು ನಾನು ಮತ್ತು ನನ್ನ ಇಬ್ಬರು ಮಕ್ಕಳು ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆವು. ಅಂದು ದೇಗುಲದಲ್ಲಿ ಹೆಚ್ಚು ಜನಸಂದಣಿ ಇದ್ದಿದ್ದರಿಂದ ಹಾಗೂ ನನ್ನ ಮಕ್ಕಳಿಗೆ `ಅಮ್ಮ’ ಆಗಿದ್ದ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು. ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್ಐ ಸವಿತಾ ಪಾಟೀಲ್ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ ಎಂದು ವೀಡಿಯೋ ಮೂಲಕ ಐಶ್ವರ್ಯ ಕ್ಷಮೆಯಾಚಿಸಿದ್ದಾರೆ.
40 ಸಾವಿರ ರೂ.ಲಂಚದ ಹಣಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ದಾಳಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಎಫ್ ಡಿಎ
ಚಿತ್ರದುರ್ಗ: 40 ಸಾವಿರ ರೂ.ಲಂಚದ ಹಣಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದು, ಎಫ್ ಡಿಎ ಓರ್ವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಎಸಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಎಫ್ಡಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಸವರಾಜು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಎಫ್ ಡಿಎ.
ಆರ್ಟಿಸಿ ತಿದ್ದುಪಡಿ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಚಿತ್ರದುರ್ಗ ಉಪವಿಭಾಗಾಧಿಕಾರಿ ಕಚೇರಿಯ ಎಫ್ಡಿಎ ಬಸವರಾಜು ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೆಲ್ಲೋಡು ಗ್ರಾಮದ ಹನುಮಂತಪ್ಪ ಎಂಬವರಿಂದ 40 ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಈ ವೇಳೆ ಬಸವರಾಜು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಕವಲೇಪುರ ಹಾಗೂ ಡಿವೈಎಸ್ಪಿ ಕಲಾವತಿ ಅವರ ನೇತೃತ್ವದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.

