HomeKarnatakaBIG NEWS: ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: FIR ದಾಖಲಾಗುತ್ತಿದ್ದಂತೆ ನಾಪತ್ತೆಯಾದ ಶಾಸಕ ಹಾಗೂ ಮಗ

BIG NEWS: ಪಿಎಸ್ಐ ಅನುಮಾನಾಸ್ಪದ ಸಾವು ಕೇಸ್: FIR ದಾಖಲಾಗುತ್ತಿದ್ದಂತೆ ನಾಪತ್ತೆಯಾದ ಶಾಸಕ ಹಾಗೂ ಮಗ

ಯಾದಗಿರಿ: ಯಾದಗಿರಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಪಂಪನಗೌಡ ನಾಪತ್ತೆಯಾಗಿದ್ದಾರೆ.

ಪೋಸ್ಟಿಂಗ್ ಗಾಗಿ ಪದೇ ಪದೇ ಶಾಸಕರಿಂದ ಹಣಕ್ಕೆ ಬೇಡಿಕೆ ಹಾಗೂ ಕಿರುಕುಳಕ್ಕೆ ಬೇಸತ್ತು ಪಿಎಸ್ಐ ಪರಶುರಾಮ್ ಸಾವನ್ನಪ್ಪಿದ್ದಾರೆ ಎಂದು ಪರಶುರಾಮ್ ಪತ್ನಿ ಶ್ವೇತಾ ಯಾದಗಿರಿ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಾದಗಿರಿ ಠಾಣೆಯಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರ ಪಂಪನಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎಫ್ಐಆರ್ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿರುವ ಶಾಸಕ ಹಾಗೂ ಪುತ್ರ ಇಬ್ಬರೂ ನಾಪತ್ತೆಯಾಗಿದ್ದಾರೆ. ಮೊಬೈಲ್ ಸ್ವಿಚ್ಡ್ ಆಫ್ ಮಡಿಕೊಂಡಿದ್ದು, ಯಾರ ಸಂಪರ್ಕಕ್ಕೂ ಸಿಗದೇ ಅಜ್ಞಾತ ಸ್ಥಳಕ್ಕೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular