PSI ನೇಮಕಾತಿ ಅಕ್ರಮ; ರಾಜಕೀಯ ನಾಯಕರಿಗೆ ಸಮನ್ಸ್ ಜಾರಿ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜಕೀಯ ನಾಯಕರಿಗೆ ಸಮನ್ಸ್ ನೀಡಲಾಗಿದೆ.

ಪ್ರಕರಣ ಸಂಬಂಧ ವಿಚಾರಣಾ ಆಯೋಗದಿಂದ ಹಲವು ರಾಜಕೀಯ ನಾಯಕರಿಗೆ ಸಮನ್ಸ್ ನೀಡಲಾಗಿದ್ದು, ಸಾಕ್ಷ್ಯಗಳಿದ್ದರೆ ಒದಗಿಸುವಂತೆ ಸೂಚಿಸಲಾಗಿದೆ.

ಹಗರಣದ ಬಗ್ಗೆ ವಿಚಾರಣಾ ಆಯೋಗಕ್ಕೆ ಕೆಲವರ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದ್ದರು. ದೂರುದಾರರ ಮನವಿ ಹಿನ್ನೆಲೆಯಲ್ಲಿ ನ್ಯಾ.ಬಿ.ವೀರಪ್ಪ ಆಯೋಗದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಡಿಸಿಎಂ ಅಶ್ವತ್ಥನಾರಾಯಣ, ಬಸವರಾಜ್ ದಡೇಸಗೂರು ಸೇರಿದಂತೆ ಹಲವರಿಗೆ ಸಾಕ್ಷ್ಯಗಳಿದ್ದರೆ ಒದಗಿಸುವಂತೆ ಸೂಚಿಸಿ ಸಮನ್ಸ್ ಜಾರಿ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read