HomeLatest NewsBREAKING: ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮ: PSI ರಾಜಶೇಖರ್ ರಾಠೋಡ್ ಸಸ್ಪೆಂಡ್

BREAKING: ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮ: PSI ರಾಜಶೇಖರ್ ರಾಠೋಡ್ ಸಸ್ಪೆಂಡ್

ಯಾದಗಿರಿ: ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ನಡೆಸಿದ್ದ ಪಿಎಸ್ ಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆ ಪಿಎಸ್ ಐ ರಾಜಶೇಖರ್ ರಾಠೋಡ್ ಸಸ್ಪೆಂಡ್ ಆಗಿರುವ ಅಧಿಕಾರಿ. ಅಮಾನತು ಮಾಡಿ ಯಾದಗಿರಿ ಎಸ್ ಪಿ ಪೃಥ್ವಿಕ್ ಶಂಕರ್ ಆದೇಶ ಹೊರಡಿಸಿದ್ದಾರೆ.

ಸಬ್ ಇನ್ಸ್ ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರಾಜಶೇಖರ್, ರೌಡಿಶೀಟರ್ ನಾಗರಾಜ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ನಡೆಸಿದ್ದರು. ಈ ಫೋಟೋ, ವಿಡಿಯೋಗಳು ಭಾರಿ ವೈರಲ್ ಆಗಿತ್ತು. ಪಿಎಸ್ ಐ ವಿರುದ್ಧ ಮಾಜಿ ಸಚಿವ ರಾಜುಗೌಡ ದೂರು ನೀಡಿದ್ದರು. ತನಿಖೆ ನಡೆಸಿದ ಬಳಿಕ ಪಿಎಸ್ ಐ ರಾಜಶೇಖರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular