HomeKarnatakaಕರ್ತವ್ಯ ಲೋಪ ಆರೋಪ, ಪಿಎಸ್ಐ ಅಮಾನತು

ಕರ್ತವ್ಯ ಲೋಪ ಆರೋಪ, ಪಿಎಸ್ಐ ಅಮಾನತು

ಕೊಪ್ಪಳ: ಕರ್ತವ್ಯ ಲೋಪ ಆರೋಪದ ಮೇಲೆ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ಸುನಿಲ್ ಅವರನ್ನು ಅಮಾನತು ಮಾಡಲಾಗಿದೆ.

ಆಡಳಿತಾತ್ಮಕ ವಿಚಾರದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಪಿಎಸ್ಐ ಸುನಿಲ್ ಅವರನ್ನು ಅಮಾನತು ಮಾಡಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ದಿ ಆದೇಶ ಹೊರಡಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಮುನಿರಾಬಾದ್ ಠಾಣೆಯಲ್ಲಿ ಪಿಎಸ್ಐ ಆಗಿ ಸುನಿಲ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಹಲವು ಅನಧಿಕೃತ ಚಟುವಟಿಕೆ ಬೆಳಕಿಗೆ ಬಂದಿದ್ದವು. ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ, ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟದಂತಹ ಪ್ರಕರಣಗಳು ವರದಿಯಾಗಿದ್ದ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕೆ ಸುನಿಲ್ ಅವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular