HomeKarnatakaಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಪಿಎಸ್ಐ ಎತ್ತಂಗಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಪಿಎಸ್ಐ ಎತ್ತಂಗಡಿ

ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ನೂರ ಪೊಲೀಸ್ ಠಾಣೆಯ ಪಿಎಸ್ಐ ವಿಶ್ವಾರಾಧ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಚಿನ್ ಕುಟುಂಬದವರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವಾರಾಧ್ಯ ಅವರನ್ನು ಕಲಬುರಗಿ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಧನ್ನೂರು ಪೊಲೀಸ್ ಠಾಣೆಯಿಂದ ಕಲಬುರಗಿ ಕೇಂದ್ರ ಕಚೇರಿಗೆ ಅವರನ್ನು ವರ್ಗಾಯಿಸಲಾಗಿದೆ.

ಇನ್ನು ವಿಧಿವಿಜ್ಞಾನ ಕೇಂದ್ರದಿಂದ ಎಫ್ಎಸ್ಎಲ್ ವರದಿ ಸಲ್ಲಿಕೆಯಾಗಿದ್ದು, ಕೈಬರಹ ಸಚಿನ್ ಪಾಂಚಾಲ್ ಅವರದ್ದಾಗಿದೆ ಎಂದು ದೃಢಪಟ್ಟಿದೆ. ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ರೈಲ್ವೆ ಪೊಲೀಸರಿಂದ ಸಿಐಡಿ ಕಚೇರಿಗೆ ದಾಖಲೆ ವರ್ಗಾವಣೆ ಮಾಡಲಾಗಿದೆ. ಸಿಐಡಿ ತಂಡ ತನಿಖೆಯನ್ನು ಚುರುಕುಗೊಳಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular