HomeLatest NewsBREAKING: ಅಪಘಾತದಲ್ಲಿ ಗಾಯಗೊಂಡಿದ್ದ PSI ಚಿಕಿತ್ಸೆ ಫಲಿಸದೇ ಸಾವು

BREAKING: ಅಪಘಾತದಲ್ಲಿ ಗಾಯಗೊಂಡಿದ್ದ PSI ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಎಸ್ ಐ ಚಿಕಿತ್ಸೆ ಫಲಿಸದೇ ಸಾವನ್ನಪಿರುವ ಘಟನೆ ನಡೆದಿದೆ.

ಬೆಂಗಳೂರಿನ ತಲಘಟ್ಟಪುರ ಮೆಹಬೂಬ್ ಗುಡ್ಡಳ್ಳಿ ಮೃತ ಪಿಎಸ್ ಐ. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲು ಕಾರಿನಲ್ಲಿ ತೆರಳುತ್ತಿದ ವೇಳೆ ಕಾರು ಹಾಳಾದ ಕಾರಣ ರಸ್ತೆ ಬದಿ ವಾಹನ ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಪಿಎಸ್ ಐಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಪಿಎಸ್ ಐ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular