HomeUncategorizedBREAKING: ಮದುವೆಯಾಗುವುದಾಗಿ ನಂಬಿಸಿ ಪಿಎಸ್ಐ ನಿಂದ ಯುವತಿ ಮೇಲೆ ಅತ್ಯಾಚಾರ

BREAKING: ಮದುವೆಯಾಗುವುದಾಗಿ ನಂಬಿಸಿ ಪಿಎಸ್ಐ ನಿಂದ ಯುವತಿ ಮೇಲೆ ಅತ್ಯಾಚಾರ

ಚಿತ್ರದುರ್ಗ: ಪಿಎಸ್ ಐ ಓರ್ವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಕೈಕೊಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಪಿಎಸ್ ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವತಿ ಚಿತ್ರದುರ್ಗ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾದಿಲಿಂಗಪ್ಪ ಚಿತ್ರದುರ್ಗ ನಗರ ಠಾಣೆಯಲ್ಲಿ ಪಿಎಸ್ ಐ ಆಗಿದ್ದಾಗ ಇನ್ ಸ್ಟಾಗ್ರಂ ಮೂಲಕ ಪರಿಚಯನಾಗಿದ್ದ. ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ. ಬಲವಂತವಾಗಿ ಚಿತ್ರದುರ್ಗದ ಲಾಡ್ಜ್, ಮನೆಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಮೂಲದ ಯುವತು ನೀಡಿರುವ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular