HomeCrimeಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಬ್ ಇನ್ಸ್ ಪೆಕ್ಟರ್ ಸಸ್ಪೆಂಡ್

ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಸಬ್ ಇನ್ಸ್ ಪೆಕ್ಟರ್ ಸಸ್ಪೆಂಡ್

ಪ್ರಯಾಗ್ ರಾಜ್: ದೂರು ಕೊಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳನ್ನು ಬಂಧಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಸಬ್ ಇನ್ಸ್ ಪೆಕ್ಟರ್ ನನ್ನು ಅಮಾನತು ಮಾಡಲಾಗಿದೆ.

ಸುಧೀರ್ ಕುಮಾರ್ ಪಾಂಡೆ ಅಮಾನತುಗೊಂಡಿರುವ ಸಬ್ ಇನ್ಸ್ ಪೆಕ್ಟರ್. ಮಹಿಳೆಯ ದೂರಿನ ಆಧಾರದ ಮೇಲೆ ಪಿಎಸ್ ಐ ಸಸ್ಪೆಡ್ ಆಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ಹಂಡಿಯಾದ ಸಹಾಯಕ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಂಡೆ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 120 ಬಿ (ಕ್ರಿಮಿನಕ್ ಪಿತೂರಿ) ಮತ್ತು ಎಸ್ ಸಿ ಎಸ್ ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಹಿಳೆಗೆ ಕೆಲ ಪುರುಷರು ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ್ದರು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪಾಂಡೆ ಮಹಿಳೆಯನ್ನು ಸೆ.21ರಂದು ಪೊಲೀಸ್ ಔಟ್ ಪೋಸ್ಟ್ ಠಾಣೆಗೆ ಕರೆದಿದ್ದ. ಆರೋಪಿಗಳನ್ನು ಬಂಧಿಸಲು ಹೋಗುವ ನೆಪದಲ್ಲಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು, ಮತ್ತು ಬರುವ ಔಷಧ ಬೆರೆಸಿ ತಂಪು ಪಾನೀಯವನ್ನು ಮಹಿಳೆಗೆ ನೀಡಿದ್ದಾನೆ. ಬಳಿಕ ಆಕೆ ಪ್ರಜ್ಞೆ ತಪ್ಪಿ ಬಿದ್ದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಪೊಲೀಸ್ ಕಮಿಷ್ನರ್ ರಮಿತ್ ಶರ್ಮಾ ಹಂಡಿಯಾ ಎಸಿಪಿ ಸುಧೀರ್ ಕುಮಾರ್ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular