ಹುಬ್ಬಳ್ಳಿ: ಮಹಿಳೆಯರ ಒಳಒಡುಪುಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದ ಸೈಕೋಪಾತ್ ಓರ್ವನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮನೆಯ ಹೊರಗೆ ಬಟ್ಟೆ ಒಣಹಾಕಿದ್ದ ವೇಳೆ ಕಳ್ಳಬೆಕ್ಕಿನಂತೆ ಬಂದು ಮಹಿಳೆಯರ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಘಟನೆ ನಡೆದಿತ್ತು. ಆರೋಪಿಯ ಕೃತ್ಯಗಳು ಸಿಸಿಟಿವು ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಯಾರು? ಎಲ್ಲಿಂದ ಬಂದಿರುವವ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.