HomeKarnatakaಶುಭ ಸುದ್ದಿ: ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆ ಭರ್ತಿಗೆ ಆದೇಶ

ಶುಭ ಸುದ್ದಿ: ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆ ಭರ್ತಿಗೆ ಆದೇಶ

ಬೆಂಗಳೂರು: ರಾಜ್ಯದ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರ ಆದೇಶಿಸಿದೆ,

ಪರಿಷ್ಕೃತ ನಿಯಮಗಳ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಿ ಮುಂದಿನ ಮೂರು ತಿಂಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಸರ್ಕಾರ ಸೂಚನೆ ನೀಡಿದೆ. ಈ ಸಂಬಂಧ ಪ್ರಾಧಿಕಾರದ ಕಾರ್ಯ ನಿರ್ವಹಣಾ ನಿರ್ದೇಶಕ ಹೆಚ್. ಪ್ರಸನ್ನ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಪತ್ರ ಬರೆದಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ(ಪದವಿಪೂರ್ವ) ವೃಂದ ಮತ್ತು ನೇಮಕಾತಿಗೆ ಸಂಬಂಧಿಸಿದ ನಿಯಮಗಳ ಅನುಸಾರ ಶೇಕಡ 25 ರಷ್ಟು ಪ್ರಾಂಶುಪಾಲ ಹುದ್ದೆಗಳನ್ನು ನೇರ ನೇಮಕಾತಿ ಕೋಟಾದಡಿ ನಿಗದಿಪಡಿಸಲಾಗಿದೆ. ಈ ಹುದ್ದೆಗಳ ಪೈಕಿ ಆರ್ಥಿಕ ಇಲಾಖೆ ಸಹಮತಿ ನೀಡಿರುವ ಹುದ್ದೆಗಳ ಭರ್ತಿಗೆ ಆಯ್ಕೆ ಪ್ರಕ್ರಿಯೆ ನಡೆಸಯವಂತೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular