ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ವಿಳಂಬವಾಗಿ ದಾಖಲಾಗುತ್ತಿದ್ದ ವಿದ್ಯಾರ್ಥಿಗಳಿಗೆ ʻವಿಳಂಬ ದಾಖಲಾತಿ ದಂಡ ಶುಲ್ಕʼ ವಿಧಿಸುವುದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಈ ಶೈಕ್ಷಣಿಕ (2026-27) ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ ₹ 670 ವಿಳಂಬ ದಾಖಲಾತಿ ದಂಡ ಶುಲ್ಕ(Fine for late admission for 10 days) ಹಾಗೂ ₹ 2,220 ವಿಶೇಷ ದಂಡ ಶುಲ್ಕ (Special fine for late admission for 20 days) ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.



