ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಸಿಸಿಬಿ ಪೊಲೀಸರು ಬೆಂಗಳೂರಿನ ಪಬ್ ಗಳ ಮೇಲೆ ಡಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚಾರಣೆ ನಡೆಸಿದ್ದು, ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಮಿರಾಜ್ ಪಬ್, ಕೋರಮಂಗಲದಲ್ಲಿರುವ ಸನ್ ಬರ್ನ್ ಪಬ್ ಸೇರಿದಂತೆ ವಿವಿಧ ಪಬ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹಲವು ವಿದೇಶಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ.
ಈ ಬಗ್ಗೆ ಕಬ್ಬನ್ ಪಾರ್ಕ್ ಹಾಗೂ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.