ಸಾರ್ವಜನಿಕರಿಗೆ ಗುಡ್ ನ್ಯೂಸ್: ಗಣರಾಜ್ಯೋತ್ಸವ ಪ್ರಯುಕ್ತ ರಾಜಭವನ ವೀಕ್ಷಣೆಗೆ ಅವಕಾಶ

ಬೆಂಗಳೂರು: 76ನೇ ಗಣರಾಜ್ಯೋತ್ಸವ ಪ್ರಯುಕ್ತ ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಇಂದು ಮತ್ತು ನಾಳೆ ರಾಜಭವನಕ್ಕೆ ಪ್ರವೇಶ ನೀಡಲಾಗಿದೆ.

ರಾಜಭವನದ ಮುಖ್ಯದ್ವಾರದ ಮೂಲಕ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಿದ್ದು, ಆಧಾರ್ ಕಾರ್ಡ್ ಅಥವಾ ಭಾವಚಿತ್ರವಿರುವ ಗುರುತಿನ ಚೀಟಿ ತರಬೇಕು. ಇಂದು ಮತ್ತು ನಾಳೆ ಸಂಜೆ 6 ರಿಂದ 7.30ರವರೆಗೆ ರಾಜಭವನ ವೀಕ್ಷಣೆಗೆ ಅವಕಾಶ ಇರುತ್ತದೆ.

ಸಾರ್ವಜನಿಕರು ಕ್ಯಾಮರಾ, ಕೈಚೀಲ, ಚೂಪಾದ ವಸ್ತುಗಳು, ತಿಂಡಿ ತಿನಿಸು, ಪ್ಲಾಸ್ಟಿಕ್ ವಸ್ತುಗಳು ಸೇರಿದಂತೆ ಯಾವುದೇ ಲಗೇಜ್ ತರುವಂತಿಲ್ಲ. ರಾಜಭವನದ ಒಳಗೆ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ. ರಾಜಭವನದ ಭದ್ರತಾ ಸಿಬ್ಬಂದಿ ನೀಡುವ ಸೂಚನೆ ಪಾಲಿಸಬೇಕು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read