ಸಾರ್ವಜನಿಕರೇ ಎಚ್ಚರ : ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಶಿಕ್ಷಾರ್ಹ ಅಪರಾಧ

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮತದಾನಕ್ಕೆ ಚುನಾವಣಾ ಆಯೋಗ ಎಲ್ಲಾ ರೀತಿಯ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ.

ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ನಿಮ್ಮ ಮತವನ್ನು ನೀವೇ ಚಲಾಯಿಸಿ. ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಪರಾಧ ಮತ್ತು ಶಿಕ್ಷಾರ್ಹ.ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ. ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸಿ, ಸಮರ್ಥರನ್ನು ಆರಿಸಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ನಿಮ್ಮ ಮತ ನಿಮ್ಮ ಹಕ್ಕು. ಪ್ರತಿಯೊಬ್ಬರು ನಿಮ್ಮ ಮತದಾನದ ಹಕ್ಕನ್ನು ಚಲಾಯಿಸಿ. ದೇಶದ ಸಂವಿಧಾನವನ್ನು ಗೌರವಿಸುವ, ಸಂರಕ್ಷಿಸುವ ನಾಯಕರನ್ನು ಆರಿಸಿ.ಮತದಾನ ಸಂಭ್ರಮವಾದಾಗ ಮಾತ್ರ ದೇಶ ಬದಲಾಗುತ್ತದೆ .

ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಪರಾಧ ಮತ್ತು ಶಿಕ್ಷಾರ್ಹ, ಮುಕ್ತ ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೆ ನಿರ್ಭೀತಿಯಿಂದ ಮತ ಚಲಾಯಿಸಿ. ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತಪಡಿಸಿಕೊಂಡು ಮತದಾನ ಮಾಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read