HomeLatest Newsಸಾರ್ವಜನಿಕರೇ ಅನಧಿಕೃತ ಸೈಟ್ ಖರೀದಿಸಬೇಡಿ, ಅಕ್ರಮ ಬಡಾವಣೆ ಸರ್ಕಾರದಿಂದ ಮುಟ್ಟುಗೋಲು

ಸಾರ್ವಜನಿಕರೇ ಅನಧಿಕೃತ ಸೈಟ್ ಖರೀದಿಸಬೇಡಿ, ಅಕ್ರಮ ಬಡಾವಣೆ ಸರ್ಕಾರದಿಂದ ಮುಟ್ಟುಗೋಲು

ಹಾವೇರಿ: ಪ್ರಾಧಿಕಾರದ ಅನುಮೋದನೆ ಇಲ್ಲದೇ ಅನಧಿಕೃತ ಬಡಾವಣೆಗಳಲ್ಲಿ ಸಾರ್ವಜನಿಕರು ನಿವೇಶನಗಳನ್ನು ಖರೀದಿಸಬಾರದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅನೇಕ ಕಡೆಗಳಲ್ಲಿ ಅನಧಿಕೃತ ಬಡಾವಣೆಗಳು ತಲೆ ಎತ್ತುತ್ತಿವೆ. ಸೂಕ್ತ ಆಕ್ಷನ್ ಪ್ಲಾನ್ ಇರುವುದಿಲ್ಲ. ಪ್ರಾಧಿಕಾರಗಳು ಅನುಮೋದನೆ ನೀಡಿರುವುದಿಲ್ಲ. ಅಂತಹ ನಿವೇಶನಗಳನ್ನು ಸಂಪೂರ್ಣ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ನಿವೇಶನಗಳನ್ನು ಖರೀದಿಸಿದವರಿಗೂ ತೊಂದರೆಯಾಗಬಹುದು ಎಂದು ಹೇಳಿದ್ದಾರೆ.

ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳಿಗೆ ಸರ್ಕಾರದ ಯಾವುದೇ ಸೌಲಭ್ಯ ಸಿಗುವುದಿಲ್ಲ. ಹೀಗಾಗಿ ಸಾರ್ವಜನಿಕರು ನಿವೇಶನ ಖರೀದಿಸಬಾರದು, ಖರೀದಿಸಿದಲ್ಲಿ ನಿವೇಶನ ಕಳೆದುಕೊಳ್ಳುತ್ತೀರಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular