HomeKarnataka21 ದಿನದೊಳಗೆ ಜನನ, ಮರಣ ಪ್ರಮಾಣ ಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ

21 ದಿನದೊಳಗೆ ಜನನ, ಮರಣ ಪ್ರಮಾಣ ಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ

ದಾವಣಗೆರೆ : ಜನನ ಹಾಗೂ ಮರಣ ನೋಂದಣಾ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೊಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಸೂಚನೆ ನೀಡಿದರು.

ಅವರು (16) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ. ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಹಾಗೂ ಕೃಷಿ ಅಂಕಿ ಅಂಶಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಮತ್ತು ಮರಣ ನೋಂದಣಿ ಮಾಡುವ ಸಮಯದಲ್ಲಿ ಮರಣ ದಿನಾಂಕ ಹಾಗೂ ನೋಂದಣಿ ಘಟಕವನ್ನು ತಪ್ಪಾಗಿ ಆಯ್ಕೆ ಮಾಡುತ್ತಿರುವುದು. ಮತ್ತು ಬೇರೆಯವರ ಆಧಾರ್ ಜೋಡಣೆ ಮಾಡಿ ಮರಣ ಪ್ರಮಾಣ ವಿತರಿಸುತ್ತಿರುವುದು ಕಂಡು ಬಂದಿದ್ದು, ಈ ರೀತಿಯ ತಪ್ಪುಗಳು ಇನ್ನೂ ಮುಂದೆ ಆಗದಂತೆ ಎಚ್ಚರವಹಿಸಿ ಕೆಲಸ ನಿರ್ವವಹಿಸಬೇಕು ಎಂದು ಸೂಚನೆ ನೀಡಿದರು.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular