HomeKarnatakaಸಾರ್ವಜನಿಕರೇ ಗಮನಿಸಿ : ‘ಆಯುಷ್ಮಾನ್ ಕಾರ್ಡ್’ ಪ್ರಯೋಜನದ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಸಾರ್ವಜನಿಕರೇ ಗಮನಿಸಿ : ‘ಆಯುಷ್ಮಾನ್ ಕಾರ್ಡ್’ ಪ್ರಯೋಜನದ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಕಡು ಬಡವರು ಸಹಿತ ಉನ್ನತ ಮಟ್ಟದ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸರ್ಕಾರ ರೂಪಿಸಿರುವ “ಆಯುಷ್ಮಾನ್ ಭಾರತ್ – ಪ್ರಧಾನಮಂತ್ರಿ ಜನ ಆರೋಗ್ಯ ಯೋಜನಾ – ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ” ಕಾರ್ಡ್ಗಳನ್ನು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಮಂಗಳವಾರದಂದು ಹಮ್ಮಿಕೊಳ್ಳುವ ಆಯುಷ್ಮಾನ್ ಭವ ಮೇಳಗಳಲ್ಲಿಯೇ ಸೃಜನೆ ಮಾಡಿ ವಿತರಿಸಲಾಗುತ್ತಿದೆ ಎಂದು ಬಳ್ಳಾರಿ   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲೆಯಲ್ಲಿ ಈವರೆಗೆ 8875 ಕಾರ್ಡ್ಗಳನ್ನು ಆಯುಷ್ಮಾನ್ ಭವಃ ಮೇಳಗಳಲ್ಲಿಯೇ ಸೃಜನೆ ಮಾಡಿಕೊಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಕ್ಕಾಗಿ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ಕಾರ್ಡ್ ಮಾಡಿಸಿಕೊಳ್ಳುವ ಮೂಲಕ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.

ಗಂಭಿರ ಆರೋಗ್ಯ ಸಮಸ್ಯೆಗಳ ಚಿಕಿತ್ಸಾ ಸಂದರ್ಭದಲ್ಲಿ ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ ರೂ.5 ಲಕ್ಷ ಹಾಗೂ ಎಪಿಎಲ್ ಕುಟುಂಬಗಳಿಗೆ 1.5 ಲಕ್ಷದವರೆಗೆ ಉಚಿತ ಚಿಕಿತ್ಸಾ ವೆಚ್ಚದ ಸೌಲಭ್ಯವನ್ನು ಈ ಕಾರ್ಡ್ಗಳಿಂದ ಪಡೆದುಕೊಳ್ಳಬಹುದಾಗಿದೆ ಎಂದೂ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೆಂಬಲದೊಂದಿಗೆ ಜಿಲ್ಲೆಯಾದ್ಯಂತ ವಿಮ್ಸ್ ಹಾಗೂ ಜಿಲ್ಲಾ ಆಸ್ಪತ್ರೆ ಮತ್ತು ಸ್ಥಳೀಯ ತಜ್ಞ ವೈದ್ಯರುಗಳಿಂದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್ಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಅಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ, ಆರೋಗ್ಯ ನಿರೀಕ್ಷಣಾಧಿಕಾರಿಗಳ ಮೂಲಕ ಉಪಕೇಂದ್ರ – ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಜರುಗಿರುವ ಮೇಳಗಳಲ್ಲಿ ಇಲ್ಲಿಯವರೆಗೆ ಒಟ್ಟು 111536 ಜನ ಭಾಗವಹಿಸಿ ವಿವಿಧ ರೋಗಗಳಿಗೆ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಆಯುಷ್ಮಾನ್ ಭವಃ ದಡಿಯಲ್ಲಿ ಇಲ್ಲಿಯವರೆಗೆ ಒಟ್ಟು 2475 ಆರೋಗ್ಯ ಮೇಳಗಳನ್ನು ಆಯೋಜಿಸಲಾಗಿದೆ. ಮೇಳಗಳಲ್ಲಿ 10534 ಗರ್ಭಿಣಿಯರು, ತಪಾಸಣೆ ಮಾಡಿಸಿಕೊಂಡಿದ್ದು, 83436 ಜನಕ್ಕೆ ರಕ್ತದೊತ್ತಡ ಮತ್ತು 79990 ಜನರಿಗೆ ಮಧುಮೇಹ ಪರೀಕ್ಷೆ ಕೈಗೊಳ್ಳಲಾಗಿದೆ.

ಅಲ್ಲದೇ 44216 ಜನರಿಗೆ ಬಾಯಿ ಕ್ಯಾನ್ಸರ್, 13804 ಜನರಿಗೆ ಸ್ತನ ಕ್ಯಾನ್ಸರ್, 7040 ಜನರಿಗೆ ಗರ್ಭಕಂಠದ ಕ್ಯಾನ್ಸರ್ ಪರೀಕ್ಷೆ ಮಾಡಲಾಗಿದೆ. 10514 ಜನರಿಗೆ ನೇತ್ರ ಪರೀಕ್ಷೆ ಮಾಡಲಾಗಿದ್ದು, 11551 ಜನರಿಗೆ ಕ್ಷಯರೋಗದ ಪರೀಕ್ಷೆ ಮಾಡಲಾಗಿದೆ. 7649 ಜನರಿಗೆ ಕುಷ್ಠರೋಗ ಪರೀಕ್ಷೆ ಕೈಗೊಳ್ಳಾಗಿದೆ. 4495 ಜನರಿಗೆ ಕುಟುಂಬ ಕಲ್ಯಾಣದ ವಿಧಾನಗಳ ಸೇವೆಗಳನ್ನು ಒದಗಿಸಲಾಗಿದೆ. ಶಿಬಿರಗಳಲ್ಲಿ ಇ-ಸಂಜೀವಿನಿ ಆಪ್ ಮೂಲಕ ತಜ್ಞ ವೈದ್ಯರನ್ನು ಯಾವುದೇ ಹಣದ ವೆಚ್ಚವಿಲ್ಲದೆ 13955 ಜನ ಸಂಪರ್ಕಿಸಿದ್ದಾರೆ. ಶಿಬಿರದಲ್ಲಿ 8018 ಜನರಿಗೆ ಆಯುಷ್ ಪದ್ದತಿ ಸೇವೆ ನೀಡಲಾಗಿದೆ. ಮೇಳಗಳಲ್ಲಿ 1686 ಆಹಾರ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular