ಸಾರ್ವಜನಿಕರೇ ಗಮನಿಸಿ : ಇನ್ಮುಂದೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಬೆಂಗಳೂರು  : ಕರ್ನಾಟಕದಲ್ಲಿ ಗ್ಯಾರಂಟಿಗಳ ಘೋಷಣೆ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ತನ್ನ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ಮುಂದಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರ ಯೋಜನೆಯ ಬಗ್ಗೆ ಮಾಹಿತಿಗಳನ್ನು ತಿಳಿಸಲು, ಅಥವಾ ಯೋಜನೆಯ ಹೊಸ ವಿಚಾರದ ಬಗ್ಗೆ ಅಪ್ ಡೇಟ್ ಕೊಡುತ್ತಿದೆ.

ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯುವುದು ಇದೀಗ ಬಹಳ ಸುಲಭ..ಹೌದು ‘ಕರ್ನಾಟಕ ವಾರ್ತೆ’ಯ ಅಧಿಕೃತ ವಾಟ್ಸಾಪ್ ಚಾನೆಲ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ ಮೂಲಕ ಸರ್ಕಾರ ಜನರಿಗೆ ಸರ್ಕಾರ ಎಲ್ಲಾ ರೀತಿಯ ಮಾಹಿತಿ ತಲುಪಿಸಲಿದೆ.

ನಮ್ಮ ಸರ್ಕಾರದ ಎಲ್ಲಾ ಇಲಾಖೆಗಳ ಜನಪರ ಯೋಜನೆಗಳು, ಸಾಧನೆಗಳು, ಫಲಾನುಭವಿಗಳು ಅನುಸರಿಸಬೇಕಿರುವ ಪ್ರಕ್ರಿಯೆಗಳು, ಸಾರ್ವಜನಿಕ ಜಾಗೃತಿಗಳನ್ನು ಒಳಗೊಂಡ ಸಂಪೂರ್ಣ ಮಾಹಿತಿಯನ್ನು ‘ಕರ್ನಾಟಕ ವಾರ್ತೆ’ಯ ಅಧಿಕೃತ ವಾಟ್ಸಾಪ್ ಚಾನೆಲ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ಗಳಲ್ಲಿ ನಿಯಮಿತವಾಗಿ ತಲುಪಿಸುತ್ತೇವೆ. ನಮ್ಮ ಸರ್ಕಾರದೊಂದಿಗೆ ನೇರ ಸಂಪರ್ಕ ಸಾಧಿಸಲು ಈಗಲೇ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ, ಫಾಲೋ ಮಾಡಿ ಎಂದು ಸಿಎಂ ಸಿದ್ದರಾಮಯ್ಯರವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

https://twitter.com/siddaramaiah/status/1739167046259343426

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read