ಸಾರ್ವಜನಿಕರ ಗಮನಕ್ಕೆ : ‘ಜನತಾ ದರ್ಶನ’ ಕಾರ್ಯಕ್ರಮದ ಸ್ಥಳ ಬದಲಾವಣೆ

ಬಳ್ಳಾರಿ : ಜಿಲ್ಲೆಯಲ್ಲಿ ಸೆ.25ರಂದು ನಡೆಯುವ “ಜನತಾ ದರ್ಶನ” ಕಾರ್ಯಕ್ರಮವು ಈ ಹಿಂದೆ ನಿಗದಿಪಡಿಸಿದ್ದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣ ಬದಲಾಗಿ, ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಅವರು ತಿಳಿಸಿದ್ದಾರೆ.

ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಸೆ.25ರಂದು ಬೆಳಿಗ್ಗೆ 11ಕ್ಕೆ ನಗರದ ಅನಂತಪುರ ರಸ್ತೆ ನೂತನ ಜಿಲ್ಲಾಡಳಿತ ಭವನದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಾರ್ವಜನಿಕರು, ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳೇನಾದರೂ ಇದ್ದಲ್ಲಿ, ಸೆ.25ಕ್ಕೆ ನಡೆಯುವ “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read