HomeKarnatakaಸಾರ್ವಜನಿಕರೇ ಗಮನಿಸಿ : ಸಿಎಂ ʻಜನಸ್ಪಂದನʼ ದಲ್ಲಿ ಭಾಗವಹಿಸುವವರು ಈ ದಾಖಲೆಗಳನ್ನು ಕೊಂಡೊಯ್ಯಿರಿ

ಸಾರ್ವಜನಿಕರೇ ಗಮನಿಸಿ : ಸಿಎಂ ʻಜನಸ್ಪಂದನʼ ದಲ್ಲಿ ಭಾಗವಹಿಸುವವರು ಈ ದಾಖಲೆಗಳನ್ನು ಕೊಂಡೊಯ್ಯಿರಿ

ಬೆಂಗಳೂರು : ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.

ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular