HomeHealthALERT : ಸಾರ್ವಜನಿಕರೇ..’ಹಕ್ಕಿ ಜ್ವರ’ಕ್ಕೆ ಆತಂಕಪಡುವ ಅಗತ್ಯವಿಲ್ಲ, ಇರಲಿ ಈ ಎಚ್ಚರ.!

ALERT : ಸಾರ್ವಜನಿಕರೇ..’ಹಕ್ಕಿ ಜ್ವರ’ಕ್ಕೆ ಆತಂಕಪಡುವ ಅಗತ್ಯವಿಲ್ಲ, ಇರಲಿ ಈ ಎಚ್ಚರ.!

ಕೋಳಿ ಶೀತ ಜ್ವರ(ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಕೋಳಿ ಶೀತ ಜ್ವರಕ್ಕೆ ಸಂಬಂಧಿಸಿದಂತೆ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಬೇಯಿಸಿ ನಂತರ ಸೇವಿಸಿ

ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಫೆ.23 ರಂದು ಕುರೇಕುಪ್ಪ ಕುಕ್ಕುಟ ಸಂವರ್ಧನಾ ಕೇಂದ್ರದಲ್ಲಿ ಸಾಕಾಣಿಕೆ ಮಾಡಿದ ಅಸಿಲ್ ಮತ್ತು ಕಾವೇರಿ ತಳಿಯ ಕೋಳಿಗಳಿಗೆ ಕೋಳಿ ಶೀತ ಜ್ವರ ರೋಗದ ಲಕ್ಷಣ ಕಂಡುಬAದು ಕೆಲವು ಕೋಳಿಗಳು ಮರಣ ಹೊಂದಿದ್ದವು. ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಐಎಹೆಚ್ ಮತ್ತು ವಿಬಿಗೆ ಮರಣ ಹೊಂದಿದ ಕೋಳಿಗಳ ಮಾದರಿ ಕಳುಹಿಸಲಾಗಿತ್ತು. ಫೆ.25 ರಂದು ಭೋಪಾಲ್ನ ಐಸಿಎಆರ್ – ರಾಷ್ಟಿçÃಯ ಹೈ ಸೆಕ್ಯುರಿಟಿ ಪ್ರಾಣಿ ರೋಗಗಳ ಪ್ರಯೋಗಾಲಯ ಸಂಸ್ಥೆಯಿAದ ರೋಗ ದೃಢೀಕರಣವಾಗಿರುವ ವರದಿ ಬಂದ ನಂತರ ಕೋಳಿ ಶೀತ ಜ್ವರ ರೋಗೋದ್ರೇಕಗೊಂಡಿರುವ ಬಗ್ಗೆ ಘೋಷಿಸಲಾಯಿತು. ಆಗ ಮಾರ್ಗಸೂಚಿಯಂತೆ ಇರುವ 2400 ಕೋಳಿಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂದರು.

ಫೆ.28 ರಂದು ಕಪ್ಪಗಲ್ ಗ್ರಾಮದಲ್ಲಿ ಇಂಟಿಗ್ರೇಷನ್ ಪದ್ಧತಿಯಲ್ಲಿ ಮಾಂಸದ ಕೋಳಿಗಳನ್ನು ಸಾಕಾಣಿಕೆ ಮಾಡುವ ಕೇಂದ್ರದಲ್ಲಿ ಅಸಹಜವಾಗಿ ಕೋಳಿಗಳು ಮರಣ ಹೊಂದಿದ್ದವು. ಪಶು ಪಾಲನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಒಟ್ಟು 15,000 ಕೋಳಿಗಳ ಪೈಕಿ 8,000 ಕೋಳಿಗಳು ಮರಣ ಹೊಂದಿದ್ದವು. ಮರಣ ಹೊಂದಿದ ಕೋಳಿಗಳ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಐಎಹೆಚ್ ಮತ್ತು ವಿಬಿ ಹಾಗೂ ಭೋಪಾಲ್ನ ಐಸಿಎಆರ್ – ರಾಷ್ಟಿçÃಯ ಹೈ ಸೆಕ್ಯುರಿಟಿ ಪ್ರಾಣಿ ರೋಗಗಳ ಪ್ರಯೋಗಾಲಯ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ವಿವರಿಸಿದರು.

ಜಿಲ್ಲೆಯಲ್ಲಿ ಒಟ್ಟು 74 ಮಾಂಸದ ಕೋಳಿ (ಫಾರಂ) ಹಾಗೂ 14 ಮೊಟ್ಟೆ ಕೋಳಿ ಸಾಕಾಣಿಕೆ ಕೇಂದ್ರಗಳಿವೆ ಹಾಗೂ 1,30,221 ಹಿತ್ತಲ ಕೋಳಿ ಇವೆ. ಮರಣ ಹೊಂದಿದ ಕೋಳಿಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ ಮತ್ತು ಕೋಳಿ ಶೀತ ಜ್ವರ ಕಂಡಿರುವ ಕೋಳಿ ಸಾಕಾಣಿಕೆ ಕೇಂದ್ರವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ವಾಹನಗಳ ಮತ್ತು ಸಾರ್ವಜನಿಕರ ಪ್ರವೇಶ ನಿಷೇಧಿಸಲು ಕ್ರಮವಹಿಸಲಾಗಿದೆ ಎಂದರು.
ಕಪ್ಪಗಲ್ ಗ್ರಾಮದ ಕೋಳಿ ಸಾಕಾಣಕೆ ಕೇಂದ್ರದ 1 ಕಿ.ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕೋಳಿ ಶೀತ ಜ್ವರದ ಬಗ್ಗೆ ಅರಿವು ಮೂಡಿಸಲು ಡಂಗುರ ಸಾರಲಾಗಿದೆ. ರಸಾಯನಿಕ ದ್ರಾವಣ ಸಿಂಪಡಿಸಿ ಸ್ಯಾನಿಟೈಜೇಷನ್ ಮಾಡಲಾಗಿದೆ. ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ಇರುವ ಹಿತ್ತಲ ಕೋಳಿಗಳ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ ಎಂದು ತಿಳಿಸಿದರು.

*ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ:

ಜಿಲ್ಲೆಗೆ ಬೆಂಗಳೂರಿನ ಐಎಹೆಚ್ ಮತ್ತು ವಿಬಿ ಪ್ರಯೋಗಾಲಯದ ವಿಜ್ಞಾನಿಗಳು ಮತ್ತು ಪಶುಪಾಲನಾ ಇಲಾಖೆಯ ನಿರ್ದೇಶಕರು ಭೇಟಿ ನೀಡಿ ಹಕ್ಕಿ ಜ್ವರದ ನಿಯಂತ್ರಣ ಮಾರ್ಗಸೂಚಿಯಂತೆ ಕಟ್ಟೆಚ್ಚರ ವಹಿಸಲು ಜಿಲ್ಲೆಯ ವಿವಿಧ ತಾಲ್ಲೂಕುಗಳ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ತರಬೇತಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಕ್ರಮ ಜರುಗಿಸಲು ಪಶುವೈದ್ಯಾಧಿಕಾರಿಗಳ ನೇತೃತ್ವದಲ್ಲಿ 13 ಕ್ಷೀಪ್ರ ಪ್ರತಿಕ್ರಿಯೆ ತಂಡ (ರಾಪಿಡ್ ರೆಸ್ಪಾನ್ಸ್ ಟೀಮ್) ತಂಡಗಳನ್ನು ರಚನೆ ಮಾಡಲಾಗಿದೆ ಎಂದರು.

ನೆರೆ ರಾಜ್ಯದಿಂದ ಕೋಳಿ ಶೀತ ಜ್ವರ ಪ್ರವೇಶವಾಗದಂತೆ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದ್ದು, ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular