HomeKarnatakaಪೌರ ಕಾರ್ಮಿಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಪೌರ ಕಾರ್ಮಿಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಿಂದ ಮಂಜೂರಾದ 119 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.

ಈ ಪೈಕಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಾವಣಗೆರೆ ಮಹಾನಗರಪಾಲಿಕೆಯ ವೆಬ್ ಸೈಟ್ www.davanagerecity.mrc.gov.in ನಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯಿಂದ ಬಾಧಿತರಾಗುವ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ 15 ದಿನಗಳೊಗಾಗಿ ಆಯುಕ್ತರ ಕಚೇರಿ, ಮಹಾನಗರ ಪಾಲಿಕೆ, ದಾವಣಗೆರೆ. ಇಲ್ಲಿಗೆ ಸಲ್ಲಿಸಬಹುದು ಎಂದು ಆಯುಕ್ತರು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular