ಬಳ್ಳಾರಿ : ಸಿಪೆಟ್ ಮೈಸೂರು ಕಾಲೇಜ್ ನಲ್ಲಿ ಪಿಯುಸಿ ಉತ್ತೀರ್ಣ ಮತ್ತು ಅನುತೀರ್ಣರಾದವರಿಗೆ ಉಚಿತ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬಹುದಾಗಿದೆ.
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಸಂಸ್ಥೆಯು ದೇಶದ ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಕೈಗಾರಿಕೆಗಳ ಕೌಶಲ ಬೇಡಿಕೆಗೆ ಅನುಗುಣವಾಗಿ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ ಮತ್ತು ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್ ಕೈಗಾರಿಕಾ ವಲಯದಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ.ಹೆಚ್ಚಿನ ಮಾಹಿತಿಗೆ ದೂ.0821-2510618 ಅಥವಾ ಮೊ.9480253024, 9791431827 ಗೆ ಸಂಪರ್ಕಿಸಬಹುದು.ರಾಜ್ಯದ ವಿದ್ಯಾರ್ಥಿಗಳು ಈ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಪ್ರಯೋಜನ ಪಡೆದು ತಮ್ಮ ವೃತ್ತಿ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಿನ್ಸಿಪಾಲ್ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಶ್ರೀಕಾಂತ್ ಶಿರಾಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.