HomeKarnatakaದ್ವಿತೀಯ ಪಿಯುಸಿ -2 ಪರೀಕ್ಷೆಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ದ್ವಿತೀಯ ಪಿಯುಸಿ -2 ಪರೀಕ್ಷೆಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ಏಪ್ರಿಲ್ 29 ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದ್ದು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ 301 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಿದ ಎಲ್ಲಾ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ https://kseab.karnataka.gov.in ವೆಬ್ಸೈಟ್ ನಲ್ಲಿ ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

11 ಅಂಕಿಗಳ ನೋಂದಣಿ ಸಂಖ್ಯೆ ಹೊಂದಿಲ್ಲದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ದ್ವಿತೀಯ ಪಿಯುಸಿ ಪರೀಕ್ಷೆ- 2ಗೆ ಈಗಾಗಲೇ ಪ್ರಕಟಿಸಲಾದ ವೇಳಾಪಟ್ಟಿಯಲ್ಲಿ ಮೇ 4ರಂದು ನಿಗದಿಯಾಗಿದ್ದ ಗೃಹ ವಿಜ್ಞಾನ ವಿಷಯದ ಪರೀಕ್ಷೆ ಮುಂಗಡಲಾಗಿದೆ. ಮೇ 9 ರಂದು ಬೆಳಗ್ಗೆ 10.15ರಿಂದ  1:30ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular