HomeKarnatakaವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 2025-26ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಜೂ. 2 ರಿಂದ ಪಿಯುಸಿ ತರಗತಿ...

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 2025-26ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಜೂ. 2 ರಿಂದ ಪಿಯುಸಿ ತರಗತಿ ಆರಂಭ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆ 2025- 26ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 2ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ.

ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಯ ಮರು ದಿನದಿಂದಲೇ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ದಾಖಲಾತಿ ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ.

ಕಾಲೇಜ್ ದಿನಗಳ ಮೊದಲ ಅವಧಿ ಜೂನ್ 2ರಿಂದ ಸೆಪ್ಟೆಂಬರ್ 21ರವರೆಗೆ, ಎರಡನೇ ಅವಧಿ ಅಕ್ಟೋಬರ್ 8 ರಿಂದ 2026ರ ಮಾರ್ಚ್ 31 ರವರೆಗೆ ನಡೆಯಲಿದೆ. ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಮಧ್ಯಂತರ ರಜೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂ. 16 ರಿಂದ ಪ್ರಾಯೋಗಿಕ ತರಗತಿಗಳು ಆರಂಭವಾಗಲಿದ್ದು, ಆಗಸ್ಟ್ 11 ರಿಂದ 14ರ ವರೆಗೆ ಪ್ರಥಮ ಕಿರು ಪರೀಕ್ಷೆ, ಅ. 9 ರಿಂದ ಅ. 27 ರವರೆಗೆ ಮಧ್ಯವಾರ್ಷಿಕ ಪರೀಕ್ಷೆ, ಡಿಸೆಂಬರ್ 19 ರಿಂದ 23ರ ವರೆಗೆ ಎರಡನೇ ಕಿರುಪರೀಕ್ಷೆ, 2026ರ ಜನವರಿ 5 ರಿಂದ 20ರವರೆಗೆ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು, ಜನವರಿ 21ರಿಂದ ಫೆಬ್ರವರಿ 14ರ ವರೆಗೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು, ಫೆಬ್ರವರಿ 10 ರಿಂದ 25 ರವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 31ರಂದು ಫಲಿತಾಂಶ ಪ್ರಕಟಿಸಲಾಗುವುದು. ಫೆಬ್ರವರಿ 26 ರಿಂದ ಮಾರ್ಚ್ 21ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular