HomeKarnatakaದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಮೌಲ್ಯಮಾಪನ, ಮರು ಎಣಿಕೆ ಬಗ್ಗೆ ಇಲ್ಲಿದೆ...

ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರು ಮೌಲ್ಯಮಾಪನ, ಮರು ಎಣಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆದುಕೊಳ್ಳಲು ಶುಕ್ರವಾರದಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಏಪ್ರಿಲ್ 27ರವರೆಗೆ ಸ್ಕ್ಯಾನ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಹಂತ ಹಂತವಾಗಿ ವಿದ್ಯಾರ್ಥಿಗಳ ಸ್ಕ್ಯಾನಿಂಗ್ ಪ್ರತಿಯನ್ನು ಅಪ್ಲೋಡ್ ಮಾಡಲಾಗುವುದು. ಅಪ್ಲೋಡ್ ಆದ ಪ್ರತಿಗಳ ಬಗ್ಗೆ ವಿದ್ಯಾರ್ಥಿಗಳ ಇ-ಮೇಲ್ ಹಾಗೂ ಮೊಬೈಲ್ ಗೆ ಸಂದೇಶ ಕಳುಹಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 26 ರಿಂದ ಮೇ 2 ರವರೆಗೆ ಸ್ಕ್ಯಾನ್ ಮಾಡಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಸ್ಕ್ಯಾನ್ ಪ್ರತಿ ಪಡೆದವರು ಮರು ಮೌಲ್ಯಮಾಪನ, ಮರು ಎಣಿಕೆಗೆ ಮೇ 3 ರಿಂದ 8 ರವರೆಗೆ ಅರ್ಜಿ ಸಲ್ಲಿಸಬಹುದು. ಸ್ಕ್ಯಾನಿಂಗ್ ಪ್ರತಿಪಡೆಯಲು ಪ್ರತಿ ವಿಷಯಕ್ಕೆ 530 ರೂ., ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1,670 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅಂಕಗಳ ಮರು ಎಣಿಕೆಗೆ ಯಾವುದೇ ಶುಲ್ಕ ವಿಧಿಸಲಿಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular