ಏ. 8ಕ್ಕೆ 5, 8, 9ನೇ ಕ್ಲಾಸ್ ಬೋರ್ಡ್ ಪರೀಕ್ಷೆ ಫಲಿತಾಂಶ, ಏ. 10ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ ಸಾಧ್ಯತೆ

ಬೆಂಗಳೂರು: 2023 -24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಏಪ್ರಿಲ್ ಎರಡನೇ ವಾರ ಪ್ರಕಟವಾಗುವ ಸಾಧ್ಯತೆ ಇದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಚ್ 1 ರಿಂದ 22ರ ವರೆಗೆ ರಾಜ್ಯದ 1120ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 25 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಹಂತಕ್ಕೆ ತಲುಪಿದೆ. ಇನ್ನೊಂದು ವಾರದೊಳಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಅಂಕಗಳನ್ನು ಕಂಪ್ಯೂಟರೀಕರಣಗೊಳಿಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಹುತೇಕ ಏಪ್ರಿಲ್ 10ರಂದು ಅಥವಾ ಆಸುಪಾಸಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಇನ್ನು ಏಪ್ರಿಲ್ 8ರಿಂದ 10ರೊಳಗೆ 5, 8 ಮತ್ತು 9ನೇ ತರಗತಿ ಮಕ್ಕಳ ಮೌಲ್ಯಾಂಕನ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read