HomeKarnatakaವಿದ್ಯಾರ್ಥಿಗಳೇ ಗಮನಿಸಿ: ತಿಂಗಳಾಂತ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ವಿದ್ಯಾರ್ಥಿಗಳೇ ಗಮನಿಸಿ: ತಿಂಗಳಾಂತ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ತಿಂಗಳಾಂತ್ಯಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಮೌಲ್ಯಮಾಪನ ಕಾರ್ಯ ಏಪ್ರಿಲ್ 5ರಿಂದ ನಡೆಯುತ್ತಿದೆ. ಶೇಕಡ 50ರಷ್ಟು ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿದ್ದು, ವಿಜ್ಞಾನ ಮತ್ತು ವಾಣಿಜ್ಯಶಾಸ್ತ್ರ ವಿಷಯಗಳ ಮೌಲ್ಯಮಾಪನ ಕಾರ್ಯ ಪ್ರಗತಿಯಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾರದಲ್ಲಿ ಮೌಲ್ಯಮಾಪನ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಂತರ ಫಲಿತಾಂಶ ಪ್ರಕಟಿಸಲು ಏಳೆಂಟು ದಿನ ಬೇಕಾಗಿದ್ದು, ಎಲ್ಲಾ ಕಾರ್ಯ ಪೂರ್ಣಗೊಳಿಸಿ ತಿಂಗಳಾಂತ್ಯಕ್ಕೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಂಡಳಿಯ ಅಧ್ಯಕ್ಷ ಆರ್. ರಾಮಚಂದ್ರನ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular