HomeKarnatakaಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಇಂದಿನಿಂದ ಆರಂಭವಾಗಲಿದೆ.

ರಾಜ್ಯದಾತ್ಯಂತ 1124 ಕೇಂದ್ರಗಳಲ್ಲಿ 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳು ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾ. 22ರವರೆಗೆ ಪ್ರತಿದಿನ ಬೆಳಿಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಮಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ವಾರ್ಷಿಕ ಪರೀಕ್ಷೆಯಲ್ಲಿ ಮೂರು ಬಾರಿ ಅವಕಾಶ ನೀಡಲಾಗಿದ್ದು, ಯಾವ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುತ್ತದೆಯೋ ಅದನ್ನು ಉಳಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ಹಾಗಾಗಿ ವಿದ್ಯಾರ್ಥಿಗಳಿಗೆ ಯಾವುದೇ ಆತಂಕ ಬೇಡ, ಪರೀಕ್ಷೆ ಆರಂಭಕ್ಕೆ ಒಂದು ಗಂಟೆ ಮೊದಲೇ ಕೇಂದ್ರಕ್ಕೆ ಹೋಗಿ. ಹಾಲ್ ಟಿಕೆಟ್, ಪೆನ್ನು ತೆಗೆದುಕೊಂಡು ಹೋಗಿ. ಮೊಬೈಲ್, ವಾಚ್, ಕ್ಯಾಲ್ಕುಲೇಟರ್ ಸೇರಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧವಿದೆ. ಪ್ರಶ್ನೆ ಓದಿಕೊಳ್ಳಲು 15 ನಿಮಿಷ ಕಾಲಾವಕಾಶವಿದೆ. ಪ್ರತಿ ಪ್ರಶ್ನೆಗಳ ಓದಿ ಯೋಚಿಸಿ ಉತ್ತರ ಬರೆಯಿರಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular