ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಅರ್ಜಿ ಸಲ್ಲಿಕೆಗೆ ಅ. 25 ಕೊನೆ ದಿನ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1ಕ್ಕೆ ಅರ್ಜಿ ಸಲ್ಲಿಸಲು ಅ. 25 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿಗೆ 2024ರಲ್ಲಿ ನಡೆದ ಅಂತಿಮ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡ ಮತ್ತು ಫಲಿತಾಂಶ ಸುಧಾರಿಸಲು ಬಯಸುವ ವಿದ್ಯಾರ್ಥಿಗಳು 2025 ರಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ದಂಡರಹಿತ ಶುಲ್ಕ ಪಾವತಿಸಲು ಅ. 25 ಕೊನೆಯ ದಿನವಾಗಿದೆ. ದಿನಕ್ಕೆ 50 ರೂ.ನಂತೆ ಗರಿಷ್ಠ 500 ರೂಪಾಯಿವರೆಗೆ ದಂಡ ಸಹಿತ ಶುಲ್ಕ ಪಾವತಿಸಲು ನವೆಂಬರ್ 9 ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಪ್ರವರ್ಗ -1ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳು ಒಂದು ವಿಷಯಕ್ಕೆ 140 ರೂ., ಎರಡು ವಿಷಯಕ್ಕೆ 270 ರೂ. ಮತ್ತು 3 ಅಥವಾ ಹೆಚ್ಚಿನ ವಿಷಯಗಳಿಗೆ 400 ರೂ. ಪರೀಕ್ಷಾ ಶುಲ್ಕ ಪಾವತಿಸಬೇಕಿದೆ.

ಫಲಿತಾಂಶ ಉತ್ತಮಪಡಿಸಿಕೊಳ್ಳಲು ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮೊದಲ ಬಾರಿಗೆ ಒಂದು ವಿಷಯಕ್ಕೆ 175 ರೂ., ಎರಡನೇ ಹಾಗೂ ನಂತರದ ಪ್ರಯತ್ನಕ್ಕೆ ಒಂದು ವಿಷಯಕ್ಕೆ 350 ರೂ. ಪಾವತಿಸಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read