BREAKING NEWS: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಕಲಾ ವಿಭಾಗದಲ್ಲಿ ತಬಸ್ಸುಮ್, ವಾಣಿಜ್ಯ ವಿಭಾಗದಲ್ಲಿ ಅನನ್ಯಾಗೆ ಪ್ರಥಮ ಸ್ಥಾನ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 74.67 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕಲಾ ವಿಭಾಗದಲ್ಲಿ 1,34,876, ವಿಜ್ಞಾನ ವಿಭಾಗದಲ್ಲಿ 2,07,087 ವಿದ್ಯಾರ್ಥಿಗಳು ಪಾಸಾಗಿದ್ದು, ಕಲಾ ವಿಭಾಗದಲ್ಲಿ ಶೇಕಡ 61.22ರಷ್ಟು ಫಲಿತಾಂಶ ಬಂದಿದೆ.  ವಾಣಿಜ್ಯ ವಿಭಾಗದಲ್ಲಿ ಶೇಕಡ 75.89ರಷ್ಟು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ ಶೇಕಡ 85.71 ರಷ್ಟು ಫಲಿತಾಂಶ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆಗೆ ಎರಡನೇ ಸ್ಥಾನ, ಕೊಡಗು ಜಿಲ್ಲೆ ಮೂರನೇ ಹಾಗೂ ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ. http://karresults.nic.in. ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದ NMKRV ಕಾಲೇಜಿನ ತಬಸ್ಸುಮ್(593) ಪ್ರಥಮ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಮೂಡಬಿದರೆ ಆಳ್ವಾಸ್ ಕಾಲೇಜಿನ ಅನನ್ಯಾ(600) ಪ್ರಥಮ ಸ್ಥಾನ ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಕೌಶಿಕ್ ಪ್ರಥಮ ಸ್ಥಾನ(596) ಪಡೆದಿದ್ದಾರೆ. ಅವರು ಕೋಲಾರ ಗಂಗೋತ್ರಿ ಕಾಲೇಜು ವಿದ್ಯಾರ್ಥಿಯಾಗಿದ್ದಾರೆ.

ಈ ಬಾರಿಯೂ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read