HomeLatest Newsಇಂದು ಮಧ್ಯಾಹ್ನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್...

ಇಂದು ಮಧ್ಯಾಹ್ನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಕಟಿಸಲಿದ್ದಾರೆ. ಮಲ್ಲೇಶ್ವರಂನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12:30 ಕ್ಕೆ ಸಚಿವರು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ಕ್ಕೆ ವಿದ್ಯಾರ್ಥಿಗಳು https://karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಮಾರ್ಚ್ 1 ರಿಂದ 20ರವರೆಗೆ ರಾಜ್ಯದ 1771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯುಸಿ ಪರೀಕ್ಷೆಗೆ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದರು. ಏಪ್ರಿಲ್ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿದ್ದು, ಇಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular