HomeCrimeದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು: ಸಚಿವ ಸತೀಶ್ ಜಾರಕಿಹೊಳಿ ಸಂತಾಪ

ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು: ಸಚಿವ ಸತೀಶ್ ಜಾರಕಿಹೊಳಿ ಸಂತಾಪ

ಬೆಳಗಾವಿಯಲ್ಲಿ ಪರೀಕ್ಷೆಗೂ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿದ್ಯಾರ್ಥಿನಿ ಸಾವಿಗೆ ಸಚಿವ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ ಅವರ ಅಕಾಲಿಕ ನಿಧನ ಸುದ್ದಿ ಮನಕಲಕುವಂತಾಗಿದೆ’ ಎಂದು ಹೇಳಿದ್ದಾರೆ.

‘ಪರೀಕ್ಷೆಯಂತಹ ಮಹತ್ವದ ಘಟ್ಟವನ್ನು ಎದುರಿಸಲು ಸಜ್ಜಾಗಿದ್ದ ಹೊತ್ತಲ್ಲೇ ವಿಧಿಯಾಟಕ್ಕೆ ಬಲಿಯಾದ ಭೂಮಿಕಾ ಅವರ ನಿಧನವು ಕುಟುಂಬಸ್ಥರು, ಬಂಧುಬಳಗ ಹಾಗೂ ಗ್ರಾಮಸ್ಥರಿಗೆ ತುಂಬಲಾರದ ನಷ್ಟವಾಗಿದೆ. ಇಷ್ಟು ಕಿರಿಯ ವಯಸ್ಸಿನಲ್ಲಿ ಜೀವಂತ ಕನಸುಗಳು ನಶಿಸಿರುವುದು ಅತ್ಯಂತ ದುಃಖಕರ’ ಎಂದು ಸಂತಾಪ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಈ ದುರ್ಘಟನೆ ನಮ್ಮ ಎಲ್ಲ ವಿದ್ಯಾರ್ಥಿಗಳಿಗೆ ಒಂದು ಸಂದೇಶವೂ ಹೌದು — ಜೀವನವು ಯಾವುದೇ ಪರೀಕ್ಷೆಗಿಂತ ಅಮೂಲ್ಯ. ಯಾವುದೇ ಒತ್ತಡ ಅಥವಾ ಆತಂಕ ಎದುರಾದರೂ ಧೈರ್ಯದಿಂದ ಎದುರಿಸಬೇಕು. ಪೋಷಕರು, ಶಿಕ್ಷಕರು ಮತ್ತು ಸ್ನೇಹಿತರೊಂದಿಗೆ ಮನದ ಮಾತು ಹಂಚಿಕೊಳ್ಳುವುದು ಅತ್ಯಂತ ಮುಖ್ಯ. ಸಂಕಷ್ಟದ ಹೊತ್ತಿನಲ್ಲಿ ಧೈರ್ಯವೇ ನಮ್ಮ ದೊಡ್ಡ ಶಕ್ತಿ’ ಎಂದು ಹೇಳಿದ್ದಾರೆ.

‘ಭೂಮಿಕಾ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ಅಸಹನೀಯ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಾಂತ್ವನ ಹೇಳಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular