HomeIndiaBREAKING NEWS: ಪಿಯು ವಿದ್ಯಾರ್ಥಿನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ಪ್ರಿಯಕರ

BREAKING NEWS: ಪಿಯು ವಿದ್ಯಾರ್ಥಿನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಚೆನ್ನೈ: ಪಿಯುಸಿ ವಿದ್ಯಾರ್ಥಿನಿ ಜೊತೆ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲದಲ್ಲಿ ನಡೆದಿದೆ.

22 ವರ್ಷದ ನರಸಿಂಹ ಮೂರ್ತಿ ಹಾಗೂ ಆತನ ಪ್ರೇಯಸಿ ಪಿಯು ವಿದ್ಯಾರ್ಥಿನಿ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ. ನರಸಿಂಹ ಮೂರ್ತಿ ಗೌತಾಲಂ ಗ್ರಾಮದ ನಿವಾಸಿಯಾಗಿದ್ದ. ಪ್ರೀತಿಗೆ ಪೋಷಕರ ನಿರಾಕರಣ ಹಿನ್ನೆಲೆಯಲ್ಲಿ ಇಬ್ಬರೂ ನರಸಿಂಹ ಮೂರ್ತಿಯ ಮನೆಯಲ್ಲಿಯೇ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲ ವರ್ಷಗಳಿಂದ ಯುವಕ-ಯುವತಿ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ವಿಚಾರ ತಿಳಿದು ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದು ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ. ಬೆಳಿಗ್ಗೆ ಮನೆ ಬಾಬಿಲು ತೆರೆಯದಿದ್ದಾಗ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular