HomeKarnatakaBIG NEWS: ವಸತಿ ಶಾಲೆಯ ಕಟ್ಟಡದಲ್ಲೇ ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ!

BIG NEWS: ವಸತಿ ಶಾಲೆಯ ಕಟ್ಟಡದಲ್ಲೇ ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ!

ತುಮಕೂರು: ಕಾರವಾರದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದ ಬೆನ್ನಲ್ಲೇ ಇತ್ತ ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

19 ವರ್ಷದ ದೀಪಿಕಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸಿದ್ಧಾರ್ಥ್ ಪಿಯು ಕಾಲೇಜಿನ ವಿದ್ಯಾರ್ಥಿನಿ. ವಸತಿ ಶಾಲೆಯ ಮಹಡಿಯ ಮೇಲೆ ತನ್ನ ದುಪ್ಪಟ್ಟಾದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತುಮಕೂರಿನ ಶಿರಾ ತಾಲೂಕಿನ ಕುಂಟೆಗೌಡನಪಾಳ್ಯ ನಿವಾಸಿಯಾಗಿರುವ ದೀಪಿಕಾ ತುಮಕೂರಿನ ಸಿದ್ಧಾರ್ಥ್ ಪುಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದಳು. ಸಿದ್ಧಾರ್ಥ್ ವಸತಿ ನಿಲಯದಲಿ ವಾಸವಾಗಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular